ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆಯಾದ ರಂಜಿತಾ ಮನೆಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದರು.
ನಿನ್ನೆ ಚಾಕುವಿನಿಂದ ಇರಿದು ರಂಜಿತ (30) ರಫೀಕ್ ಭೀಕರವಾಗಿ ಕೊಲೆ ಮಾಡಿದ್ದ. ಇಂದು ಬೆಳಗ್ಗೆ ಕೊಲೆ ಆರೋಪಿ ರಫೀಕ್ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಸದ್ಯ ರಂಜಿತಾ ಮನೆಗೆ ಭೇಟಿ ನೀಡಿದ ಬಿವೈ ವಿಜಯೇಂದ್ರ ರಂಜಿತಾ ಕುಟುಂಬಕ್ಕೆ ಬಿಜೆಪಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

