ಹೊಸ ದಿಗಂತ ವರದಿ, ಯಲ್ಲಾಪುರ :
ರಾಷ್ಟ್ರೀಯ ಹೆದ್ದಾರಿ 63 ರ ಹುಬ್ಬಳ್ಳಿ ರಸ್ತೆಯ ಹಿಟ್ಟಿನಬೈಲ್ ಕ್ರಾಸ್ ಬಳಿ ಮೂರು ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು. ಕಾರಿನಲ್ಲಿದ್ದ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯಗಳಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಹೊಸ ವರ್ಷಾಚರಣೆಗೆಂದು ಪ್ರವಾಸಿ ತಾಣಗಳತ್ತ ತೆರಳುತ್ತದ್ದ ಕಾರುಗಳು ಅಪಘಾತಕ್ಕೀಡಾಗಿದ್ದು,ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಗಾಯಾಳುಗಳನ್ನು ತಕ್ಷಣ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದಲ್ಲಿ ಕಾರು ನುಜ್ಜು ನುಜ್ಜಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.