ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಕೆಲವೆಡೆ ಹಗುರ ಮಳೆಯಾಗಲಿದೆ. ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ ಭಾಗಗಳಾದ ಉಡುಪಿ, ದಕ್ಷಿಣ ಕನ್ನಡ, ಕಾರವಾರ ಭಾಗಗಳಲ್ಲಿ ಸಹ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.