ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಗೆ ಕೇರಳ ಈಗಾಗಲೇ ಹೈರಾಣಾಗಿದ್ದು, ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
ಭಾರತೀಯ ಹವಾಮಾನ ಇಲಾಖೆ ಕೇರಳದ 7 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದೆ.
ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಎರ್ನಾಕುಲಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ಇಂದು 6 ಸೆಂ.ಮೀ ಹಾಗೂ 11 ಸೆಂ.ಮೀ ನಡುವೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಮನ್ಸೂಚನೆ ಕೊಟ್ಟಿದೆ.
ನಾಳೆಯಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗುವ ಮುನ್ಸೂಚನೆ ಇದೆ, ಆದರೂ ಜಲಮೂಲಗಳು ಮತ್ತು ಕರಾವಳಿ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ರಜೆಯ ಹಿನ್ನೆಲೆಯಲ್ಲಿ ಜನರು ನದಿ ಹಾಗೂ ಬೀಚ್‌ಗಳನ್ನು ಪ್ರವೇಶಿಸುವುದನ್ನು ನಿಷೇಧಿಲಾಗಿದೆ.