ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಕಾರ್ಮೋಡ ಆವರಿಸಿದ್ದು, ಹಲವೆಡೆ ಮಳೆ ಆರಂಭವಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಎಂ.ಜಿ ರೋಡ್, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕೆ.ಆರ್ ಸರ್ಕಲ್, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.