ಯೆಲ್ಲೋಲೈನ್‌ ಮೆಟ್ರೋ ಓಪನಿಂಗ್‌ಗೆ ಕಾಲ ಕೂಡಿಬರ್ತಿಲ್ಲ: ಸಿಗ್ನಲಿಂಗ್‌ ಸಮಸ್ಯೆಯಿಂದ ಎಲ್ಲ ಪೋಸ್ಟ್‌ಪೋನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಹುನೀರಿಕ್ಷಿತ ಯಲ್ಲೋ ಲೈನ್ ಮೆಟ್ರೋ ಸಂಚಾರಕ್ಕೆ ಇದೀಗ ಮತ್ತೆ ಅಡ್ಡಿ ಉಂಟಾಗಿದ್ದು, ಸಿಗ್ನಲಿಂಗ್‌ನಲ್ಲಿ ಸಮಸ್ಯೆಯಿಂದಾಗಿ ಉದ್ಘಾಟನೆ ಸದ್ಯಕ್ಕಿಲ್ಲ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.

ಆರ್‌ವಿ ರೋಡ್‌ನಿಂದ ಬೊಮ್ಮಸಂದ್ರದವರೆಗೆ ಸಂಚರಿಸುವ ಯಲ್ಲೋ ಮಾರ್ಗದ ಮೆಟ್ರೋ ಇದೇ ಜೂನ್‌ಗೆ ಓಪನ್ ಆಗುತ್ತದೆ ಎಂದು ನಿರೀಕ್ಷೆಯಲ್ಲಿದ್ದ ಜನರಿಗೆ ಇದೀಗ ಮತ್ತೆ ನಿರಾಸೆಯುಂಟಾಗಿದೆ. ಸಿಗ್ನಲಿಂಗ್‌ನಲ್ಲಿ ಸಮಸ್ಯೆಯಿಂದಾಗಿ ಇದನ್ನು ಸರಿಪಡಿಸಲು ತಿಂಗಳು ಬೇಕು. ಹೀಗಾಗಿ ಮಾರ್ಗ ಸದ್ಯಕ್ಕೆ ಓಪನ್ ಆಗಲ್ಲ ಎಂದಿದೆ.

ಅನೇಕ ವಿಳಂಬಗಳ ಬಳಿಕ ಹಳದಿ ಮಾರ್ಗದ ಮೆಟ್ರೋವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲೋಕಾರ್ಪಣೆ ಮಾಡಲು ತಯಾರಿ ನಡೆಸಿತ್ತು. ಮೂರನೇ ರೈಲಿನ ತಪಾಸಣೆ ಕೂಡ ಈಗಾಗಲೇ ಪೂರ್ಣಗೊಂಡಿದೆ. ಮೆಟ್ರೋ ರೋಲಿಂಗ್ ಸ್ಟಾಕ್‌ಗೂ ರೈಲ್ವೆ ಮಂಡಳಿ ಒಪ್ಪಿಗೆ ನೀಡಿದೆ. ಅಂತಿಮ ಹಂತದ ಪರಿಶೀಲನೆಗಾಗಿ ಶೀಘ್ರವೇ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು ಕೂಡ ಬರಬೇಕಿತ್ತು. ಈ ಮಧ್ಯೆ ಉಂಟಾಗಿರುವ ಸಿಗ್ನಲಿಂಗ್ ಸಮಸ್ಯೆಯಿಂದ ಈ ಬಾರಿ ಮತ್ತೆ ಮಾರ್ಗ ಉದ್ಘಾಟನೆ ಮುಂದೂಡಿಕೆಯಾಗಿದೆ.

ಹಳದಿ ಮಾರ್ಗದ ಸಿಗ್ನಲಿಂಗ್ ಕಾರ್ಯದ ಗುತ್ತಿಗೆಯನ್ನು ವಹಿಸಿಕೊಂಡಿರುವ ಸೀಮೆನ್ಸ್ ಇಂಡಿಯಾ ಲಿಮಿಟೆಡ್ ಇತ್ತೀಚೆಗೆ ಸಿಗ್ನಲಿಂಗ್ ವ್ಯವಸ್ಥೆಯ ಪರಿಶೀಲನೆ ನಡೆಸಿತ್ತು. ಆ ಸಂದರ್ಭದಲ್ಲಿ, ಸಾಫ್ಟ್ವೇರ್ ಡೇಟಾಸೆಟ್‌ಗಳಲ್ಲಿ ದೋಷ ಕಂಡುಬಂದಿತ್ತು. ಇದೇ ಕಾರಣದಿಂದ ಕಾರ್ಯಾಚರಣೆಗೆ ಅನುಮೋದನೆ ನೀಡಲಾಗಿಲ್ಲ. ಹಳದಿ ಮಾರ್ಗದ ಮೆಟ್ರೋ ರೈಲು ಚಲನೆಯನ್ನು ಸಂಪೂರ್ಣವಾಗಿ ಸಾಫ್ಟ್‌ವೇರ್‌ನಿಂದ ನಿಯಂತ್ರಿಸಲಾಗುತ್ತದೆ. ಸಣ್ಣ ದೋಷ ಇದ್ದರೂ ವ್ಯವಸ್ಥೆಯ ಸುರಕ್ಷತೆಗೆ ಧಕ್ಕೆಯಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!