ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯು ಭಯೋತ್ಪಾದಕ ಕೃತ್ಯ ಎಂದು ಒಪ್ಪಿಕೊಂಡಿದ್ದಾರೆ.
ಭಾರತೀಯ ಪತ್ರಕರ್ತ ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ಭುಟ್ಟೋ ಜರ್ದಾರಿ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದಲ್ಲಿ ಇನ್ನೂ ಅಸ್ತಿತ್ವದಲ್ಲಿವೆ ಎಂದು ಅವರು ಒಪ್ಪಿಕೊಂಡಿದ್ದಾರೆ.
ದಾಳಿಯಲ್ಲಿ ಮೃತಪಟ್ಟವರು ಮತ್ತು ಅವರ ಕುಟುಂಬಗಳ ನೋವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ)ನಂತಹ ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದಲ್ಲಿ ಇನ್ನೂ ಅಸ್ತಿತ್ವದಲ್ಲಿವೆ ಎಂದು ಒಪ್ಪಿಕೊಂಡಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಪಾಕಿಸ್ತಾನದ ನಾಯಕರೊಬ್ಬರು ತಮ್ಮ ದೇಶದಲ್ಲಿ ಉಗ್ರರ ಅಸ್ತಿತ್ವವಿರುವುದು ಸತ್ಯ ಎಂದು ಹೇಳಿದ್ದಾರೆ.
ಪಾಕಿಸ್ತಾನ ಭಯೋತ್ಪಾದನೆಯನ್ನು ಬೆಂಬಲಿಸುವುದಿಲ್ಲ, ಪಾಕಿಸ್ತಾನವೂ ಭಯೋತ್ಪಾದನೆಯಿಂದ ತೀವ್ರವಾಗಿ ಬಳಲುತ್ತಿದೆ .ನಾವು ಭಯೋತ್ಪಾದನೆಯಿಂದ 92,000ಕ್ಕೂ ಹೆಚ್ಚು ಜೀವಗಳನ್ನು ಕಳೆದುಕೊಂಡಿದ್ದೇವೆ. ಇದರಲ್ಲಿ ಕಳೆದ ವರ್ಷ 200ಕ್ಕೂ ಹೆಚ್ಚು ದಾಳಿಗಳಲ್ಲಿ 1,200 ನಾಗರಿಕರು ಮೃತಪಟ್ಟಿದ್ದಾರೆ. ಇದು ಹೀಗೆಯೇ ಮುಂದುವರಿದರೆ, 2025 ಪಾಕಿಸ್ತಾನದ ಇತಿಹಾಸದಲ್ಲಿ ಅತ್ಯಂತ ರಕ್ತಸಿಕ್ತ ವರ್ಷವಾಗಬಹುದು ಎಂದು ಹೇಳಿದ್ದಾರೆ.