Wednesday, September 3, 2025

ನಿನ್ನೆ ಸುಪ್ರೀಂ ಕೋರ್ಟ್, ಇಂದು ಚುನಾವಣಾ ಆಯೋಗ: ರಾಹುಲ್ ಗಾಂಧಿ ಯಾರನ್ನು ನಂಬುತ್ತಾರೆ? ಕಿರಣ್ ರಿಜಿಜು ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿನ್ನೆ ತನಕ ಸುಪ್ರೀಂ ಕೋರ್ಟ್ ಬಗ್ಗೆ ಮಾತನಾಡಿದ್ದರು. ಇಂದು ಚುನಾವಣೆ ಆಯೋಗದ ಕೆಲ್ಸದ ಕುರಿತು ಮಾತನಾಡುತ್ತಾರೆ.ಹಾಗಾದ್ರೆ ಇವರು ಯಾರನ್ನು ನಂಬುತ್ತಾರೆ ಎಂದು ಕಾಂಗ್ರೆಸ್ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್‌ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಪದೇ ಪದೇ ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುತ್ತಿದ್ದಾರೆ. ಒಂದು ದಿನ ಮೊದಲು ಸುಪ್ರೀಂ ಕೋರ್ಟ್ ಬಗ್ಗೆ ಪ್ರಶ್ನೆ ಎತ್ತಿದ್ದರು. ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ನಲ್ಲಿ ನಂಬಿಕೆ ಇಡದಿದ್ದರೆ, ಯಾರನ್ನು ನಂಬುತ್ತದೆ? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಅವರು(ರಾಹುಲ್ ಗಾಂಧಿ) ಏನು ಮಾತನಾಡುತ್ತಿದ್ದಾರೆ ಎಂದು ಅವರಿಗೇ ತಿಳಿದಿಲ್ಲ. ಕಾಂಗ್ರೆಸ್‌ನ ಕೆಲವರು ಅಸಂಬದ್ಧ ಹೇಳಿಕೆಗಳಿಂದ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಹುಲ್ ಗಾಂಧಿಯವರ ಚುನಾವಣಾ ಆಯೋಗದ ವಿರುದ್ಧದ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ನಕಲಿ ಆರೋಪಗಳು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಲವು ಬಾರಿ ನಡೆದಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಾಗ ಅದೇ ಮತದಾರರ ಪಟ್ಟಿಯನ್ನು ಹೊಗಳಿದ್ದರು, ಆದರೆ ವಿಧಾನಸಭಾ ಚುನಾವಣೆಯಲ್ಲಿ ಸೋತಾಗ ಅದು ಸಮಸ್ಯೆಯಾಯಿತಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ