ಹೈದರಾಬಾದ್‌ನಲ್ಲಿ ನಿಲ್ಲದ ಲೈಂಗಿಕ ದೌರ್ಜನ್ಯ, ಒಂದು ವಾರದಲ್ಲಿ 3ಅತ್ಯಾಚಾರ ಪ್ರಕರಣಗಳು ಬೆಳಕಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೈದರಾಬಾದ್‌ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲಿವೆ. ಜೂಬ್ಲಿ ಹಿಲ್ಸ್‌ ಪ್ರಕರಣ ಇನ್ನು ತನಿಖೆಯಲ್ಲಿದೆ, ಆ ಪ್ರಕರಣ ಮಾಸುವ ಮುನ್ನವೇ ಮತ್ತೆರೆಡು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಒಂದು ವಾರದಲ್ಲಿ ಮೂರು ಅತ್ಯಾಚಾರಗಳು ನಡೆಸದಿರುವುದಾಗಿ ಪೋಲೀಸ್ ಮೂಲಗಳು ತಿಳಿಸಿವೆ.

ಮೇ 31ರಂದು ಎರಡು ಘಟನೆಗಳು ನಡೆದಿವೆ. ಚಾರ್ಮಿನಾರ್ ಸಮೀಪದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಆರೋಪಿ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿ ಎಲ್ಲಾ ವಿಚಾರವನ್ನು ತನ್ನ ತಾಯಿಗೆ ತಿಳಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಕಲಾಪತ್ಥರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಯನ್ನು 21 ವರ್ಷದ ಮೊಹಮ್ಮದ್ ಸೂಫಿಯಾನ್ ಎಂದು ಗುರುತಿಸಲಾಗಿದೆ.

ಅದೇ ದಿನ ಮತ್ತೊಂದು ದೌರ್ಜನ್ಯ ನಡೆದಿದೆ. ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮೇ 31 ರಂದು ರಾತ್ರಿ 10 ಗಂಟೆ ಸುಮಾರಿಗೆ ಪಹಾಡಿ ಷರೀಫ್‌ನ ಹನ್ನೊಂದು ವರ್ಷದ ಬಾಲಕಿ ಮನೆಗೆ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದಾನೆ. ದಾರಿ ಮಧ್ಯದಲ್ಲಿ ತನ್ನ ಸ್ನೇಹಿತನ್ನು ಜೊತೆಗೆ ಕರೆದೊಯ್ದು ಕಾರನ್ನು ಸ್ನೇಹಿತನ ಮನೆ ಕಡೆಗೆ ತಿರುಗಿಸಿದ್ದಾನೆ.ಅಲ್ಲಿ ಇಬ್ಬರೂ ಸೇರಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಾಲಕಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ನಂತರ ಮರುದಿನ ಬೆಳಗ್ಗೆ ಬಾಲಕಿಯನ್ನು ಸುಲ್ತಾನ್ ಶಾಹಿ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ. ಬೆಳಗ್ಗೆ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ಬಾಲಕಿ ಕಾಣಿಸಿದ್ದಾಳೆ. ಕೂಡಲೇ ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕರೆದೊಯ್ದು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಬಂಧಿಸಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರಗಳ ಆತಂಕ ಮೂಡಿಸಿದೆ. ಬಾಲಕಿಯ ಪೋಷಕರು ಗಾಬರಿಗೊಂಡಿದ್ದಾರೆ. ಮನೆಯಿಂದ ಹೊರ ಹೋಗಿದ್ದ ಬಾಲಕಿ ಸುರಕ್ಷಿತವಾಗಿ ಮನೆಗೆ ಮರಳುವವರೆಗೂ ಟೆನ್ಷನ್ ನಲ್ಲಿಯೇ ಇರಬೇಕಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!