ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ನಾಳೆ `ಯೋಗ ದಿನಾಚರಣೆ’ ಕಡ್ಡಾಯ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಯೋಗ ದಿನಾಚರಣೆಯ ಫೋಟೋಗಳನ್ನು ಕಾಲೇಜಿನ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಪ್ರತಿ ವರ್ಷ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!