ಇಂದು ಯೋಗ ದಿನ ಸರ್ಕಾರಿ ಶಾಲೆಗಳಿಗೆ ಅರ್ಧ ದಿನ ರಜೆ, ಆದರೆ ಒಂದು ಕಂಡೀಷನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ಸರ್ಕಾರಿ ಶಾಲೆ ಮಕ್ಕಳಿಗೆ ಅರ್ಧ ದಿನ ರಜೆ ನೀಡಲಾಗಿದೆ.  ಮಕ್ಕಳಲ್ಲೂ ಯೋಗದ ಮಹತ್ವ ಸಾರಲು ರಾಜ್ಯ ಸರ್ಕಾರ ಮುಂದಾಗಿದ್ದು, ಮಕ್ಕಳಿಗೆ ಮಾರ್ನಿಂಗ್‌ ಕ್ಲಾಸ್‌ ಮಾಡಲು ಸೂಚನೆ ನೀಡಿದೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ 8ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವಂತೆ ಸರ್ಕಾರ ಆದೇಶಿಸಿದೆ, ಇದಕ್ಕಾಗಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಎಸ್‌.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಸೇರಿದಂತೆ ಸ್ಥಳೀಯ ಯೋಗ ಸಂಸ್ಥೆಗಳ ಸಹಕಾರದೊಂದಿಗೆ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಿಳಿಸಿದೆ.

ಇಂದು ಅರ್ಧ ದಿನ ರಜೆ ಕೊಟ್ಟಿರುವ ಸರ್ಕಾರ, ನಾಳೆ ಶನಿವಾರದಂದು ಫುಲ್‌ ಕ್ಲಾಸ್‌ ಮಾಡುವಂತೆ ಸೂಚನೆ ನೀಡಿದೆ. ಇಂದು ಮೊದಲ ಒಂದೂವರೆ ಗಂಟೆಯ ಅವಧಿಯಲ್ಲಿ ವಿದ್ಯಾರ್ಥಿಗಳ ವಯಸ್ಸಿಗೆ ಅನುಗುಣವಾದ ಯೋಗಾಸನಗಳ ಅಭ್ಯಾಸಗಳನ್ನು ಹಾಗೂ ಪ್ರದರ್ಶನಗಳನ್ನು ಹಮ್ಮಿಕೊಳ್ಳಿ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!