ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ವಿಶ್ವದಾದ್ಯಂತ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಯೋಗ-ವಸುದೈವ ಕುಟುಂಬಕಂ ಥೀಮ್‌ನಲ್ಲಿ ಈ ಬಾರಿ ಯೋಗ ದಿನಾಚರಣೆ ನಡೆಯುತ್ತಿದೆ.
ಯೋಗ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ರಾಜಕೀಯ ಗಣ್ಯರು, ಸಿನಿ ತಾರೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ.
ಈಗಾಗಲೇ ಕಾರ್ಯಕ್ರಮ ಆರಂಭವಾಗಿದ್ದು, 10 ಗಂಟೆ ವೇಳೆಗೆ ಕಾರ್ಯಕ್ರಮ ಮುಗಿಯಲಿದೆ.
ಯಾರೆಲ್ಲಾ ಭಾಗಿ?
ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಪಟು ಅಂಜು ಬಾಬಿ ಜಾರ್ಜ್, ಚಿತ್ರ ನಟಿ ಭಾವನ, ಅದಿತಿ ಪ್ರಭುದೇವ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ. ವೆಂಕಟೇಶ್ ಪ್ರಸಾದ್ ಭಾಗಿಯಾಗಿದ್ದಾರೆ.