ಹೊಸದಿಗಂತ ಡಿಜಿಟಲ್ ಡೆಸ್ಕ್:
ತನ್ನ ಯೋಗ ಸೆಂಟರ್ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ.
ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಇನ್ನು ಅತ್ಯಾಚಾರ ಎಸಗಿರುವುದು ತನಿಖೆ ವೇಳೆ ಬಯಲಾಗಿದೆ. ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ. ನಿಮಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ನಿಮಗೆ ಆದರಿಂದ ಸರ್ಕಾರಿ ಕೆಲಸವು ಸಿಗಬಹುದು ಎಂದು ನಂಬಿಸಿ, ಯೋಗ ಸೆಂಟರ್ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದ.
ಅಷ್ಟೇ ಅಲ್ಲದೆ ಹದಿನೇಳು ವರ್ಷದ ಬಾಲಕಿ ಮೇಲೆ ಕೂಡ ಆರೋಪಿ ಅತ್ಯಾಚಾರವೆಸಗಿದ್ದ. ಬಾಲಕಿ ದೂರಿನ ಅನ್ವಯ ರಾಜರಾಜೇಶ್ವರಿ ನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದರು. ಅತ್ತ ಕೇಸ್ ದಾಖಲಾಗುತ್ತಿದ್ದಂತೆ ಇತ್ತ ಆರೋಪಿ ತಲೆಮರಿಸಿಕೊಂಡಿದ್ದ. ಸದ್ಯ ಪೊಲೀಸರು ಹುಡುಕಿ ಆತನನ್ನು ಬಂಧಿಸಿದ್ದಾರೆ. ಇನ್ನು ತನಿಖೆ ವೇಳೆ ಅತ್ಯಾಚಾರ ಎಸಗಿರುವುದು ಬಯಲಾಗಿದೆ.
8 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದ ಯೋಗ ಗುರು ಅರೆಸ್ಟ್
