ಹೊಸದಿಗಂತ ವರದಿ ಮಂಡ್ಯ:
ಯೋಗವು ದೇಹ ಮತ್ತು ಮನಸ್ಸನ್ನು ಸಮನ್ವಯಗೊಳಿಸುವ ಒಂದು ಪ್ರಕ್ರಿಯೆಯಾಗಿದೆ. ಇದೊಂದು ಭಾರತೀಯರು ಪ್ರಪಂಚಕ್ಕೆ ನೀಡಿದ ಅತ್ಯುತ್ತಮವಾದ ಸಂಶೋಧನೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಲಾದ ದಸರಾ ವೈವಿಧ್ಯಮಯ ಯೋಗ ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಯೋಗ ಶಾಲೆಗಳು ಹೆಚ್ಚುತ್ತಿರುವುದು ಗಮನಾರ್ಹ ವಿಷಯವಾಗಿದೆ. ಎಲ್ಲರೂ ಪ್ರತಿ ನಿತ್ಯವೂ ಯೋಗ ಅಭ್ಯಾಸವನ್ನು ಮಾಡುವುದು ಉತ್ತಮ ಆರೋಗ್ಯಕ್ಕೆ ಅವಶ್ಯಕ ಎಂದರು.
ಶಾಸಕ ಎ.ಬಿ. ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ನಮ್ಮ ದಿನನಿತ್ಯದ ಬದುಕಿನಲ್ಲಿ ಯೋಗ ಪ್ರಮುಖವಾಗಿದೆ. ಅದ್ದರಿಂದ ಎಲ್ಲರೂ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.
ಜಿಲ್ಲಾ ಆಯುಷ್ ವೈಧ್ಯಾಧಿಕಾರಿ ಡಾ.ಸೀತಾಲಕ್ಷ್ಮಿ, ಜಿಲ್ಲಾ ವಾರ್ತಾಧಿಕಾರಿ ಎಸ್.ಹೆಚ್.ನಿರ್ಮಾಲ, ಎ.ಎಫ್.ಐ.ನ ಅಧ್ಯಕ್ಷರಾದ ಕಲಾಧರ್, ಶ್ರೀರಂಗಪಟ್ಟಣ ಆಯುಷ್ ವೈಧ್ಯಾಧಿಕಾರಿ ವೆಂಕಟೇಶ್, ಯೋಗ ಗುರುಗಳಾದ ಸತ್ಯನಾರಾಯಣ ಶಾಸ್ತ್ರಿಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಯೋಗ ಪಟುಗಳು ಹಾಜರಿದ್ದರು.