ಹೊಸದಿಗಂತ ಡಿಜಿಟಲ್ ಡೆಸ್ಕ್:
ಧಾರವಾಡ ಜಿಲ್ಲಾ BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಇಂದು ಕೋರ್ಟ್ ಹಾಜರಾತಿಯಿಂದ ವಿನಾಯ್ತಿ ನೀಡಿದೆ. ಆದರೇ ಮುಂದಿನ ವಿಚಾರಣೆ ವೇಳೆ ತಪ್ಪದೇ ಹಾಜರಿರುವಂತೆ ಖಡಕ್ ಸೂಚನೆ ನೀಡಿದೆ.
ಈ ಸಂಬಂಧ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರೋಪ ನಿಗದಿಪಡಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಹೀಗಾಗಿ ಹಾಜರಾತಿಯಿಂದ ವಿನಾಯಿತಿ ಕೋರಿ ವಿನಯ್ ಕುಲಕರ್ಣಿ ಪರ ವಕೀಲರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ಬಾರಿ ವಿಚಾರಣೆಗೆ ಹಾಜರಾಗಬೇಕೆಂದು ತಾಕೀತು ಮಾಡಿತು.ಜೂ.15ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುಂದೂಡಿತು.