August 24, 2026
Monday, August 24, 2026
spot_img

ಯೋಗೇಶ್‌ ಗೌಡ ಕೊಲೆ ಕೇಸ್‌: ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಪ್ರಕರಣದ ಫೈನಲ್‌ ತೀರ್ಪು ಇದೇ ತಿಂಗಳ 15ಕ್ಕೆ ಮುಂದೂಡಿಕೆಯಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಆದೇಶ ಪ್ರಕಟವಾಗುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ ಎಲ್ಲಾ 21 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ದೇವರ ಮೇಲೆ ನನಗೆ ಭರವಸೆ ಇದೆ. ಸತ್ಯಕ್ಕೆ ಯಾವತ್ತಿದ್ದರೂ ಜಯ ಸಿಕ್ಕೇ ಸಿಗುತ್ತದೆ ಎಂದು ವಿನಯ್‌ ಕುಲಕರ್ಣಿ ಹೇಳಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !