ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಶಾಕ್ ಕೊಟ್ಟ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ರದ್ದುಗೊಳಿಸುವಂತೆ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೈಕೋರ್ಟಿನ ನ್ಯಾ.ಕೃಷ್ಣ ಎಸ್ ದೀಕ್ಷಿತರಿದ್ದ ಹೈಕೋರ್ಟ್ ಪೀಠ ,ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ್ದು, ಅಲ್ಲದೇ ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಇದಲ್ಲದೇ ಸಿಬಿಐ ಪರ ಅಭಿಯೋಜಕರಿಗೆ ಸಾಕ್ಷ ವಿಚಾರಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ನೀಡಲಾಗಿತ್ತು.ಅಲ್ಲದೇ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಲಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!