ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಲು ಬಯಸಿದ್ದ ಸಿ ಪಿ ಯೋಗೇಶ್ವರ್ ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರುವುದು ಬಹುತೇಕ ಫಿಕ್ಸ್ ಆಗಿದೆ.
ಸಿ.ಪಿ. ಯೋಗೇಶ್ವರ್ ಬುಧವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಣಿಸಿಕೊಂಡಿಸಿರುವುದು ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಂತಾಗಿದೆ. ಆ ಮೂಲಕ, ಯೋಗೇಶ್ವರ್ ಅವರು ಬಿಜೆಪಿ ಬಿಟ್ಟು ‘ಕೈ’ ಹಿಡಿಯುವುದು ಖಚಿತವಾಗಿದೆ. ಕೆಲವೇ ಹೊತ್ತಿನಲ್ಲಿ ಸಿಪಿವೈ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಚನ್ನಪಟ್ಟಣ ಕ್ಷೇತ್ರದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಶಿವಕುಮಾರ್ ಆವರು ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ. ಆ ಬಳಿಕ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ.