Sunday, August 14, 2022

Latest Posts

ದೀದಿ ನಾಡಿನಲ್ಲಿ ಭರ್ಜರಿ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಿದ್ಧ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದ ಪಂಚ ರಾಜ್ಯಗಳಲ್ಲಿ ವಿಧಾನ ಸಭಾ ಚುನಾವಣೆ ರಂಗೇರುತ್ತಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರದ ಕಣಕ್ಕಿಳಿಯಲಿದ್ದಾರೆ.

ಮಾ.16 ಮತ್ತು ಮಾ.17ರಂದು ಯೋಗಿ ಆದಿತ್ಯನಾಥ್ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿದ್ದು, ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ.

ನಂತರ ಕೆಲವು ದಿನಗಳ ಕಾಲ ತಮಿಳುನಾಡು ಹಾಗೂ ಕೇರಳದಲ್ಲೂ ಬಿಜೆಪಿ ಅಭ್ಯರ್ಥಿಗಳ ಪರ 10ಕ್ಕೂ ಹೆಚ್ಚು ರ್ಯಾಲಿಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಎ ಎನ್ ಐ ವರದಿ ತಿಳಿಸಿದೆ.

ಬಂಗಾಳದಲ್ಲಿ ಮಾ.27ರಿಂದ ಏ.29ರವರಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಸ್ಸಾಂ ನಲ್ಲಿ ಮಾ.27 ರಿಂದ ಏ 6ರವರೆಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ.2 ರಂದು ಫಲಿತಾಂಶ ಹೊರಬೀಳಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss