ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅಗೌರವ ತೋರಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.
ಲಕ್ನೋದಲ್ಲಿ ‘ಭಾರತ ರತ್ನ’ ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಸಮ್ಮಾನ್ ಸಮರೋಹ್ ಅಡಿಯಲ್ಲಿ ನಡೆದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ‘ಆ ಮಹಾನ್ ಪಕ್ಷವು ಭಾರತೀಯ ಸಂವಿಧಾನದ ಶಿಲ್ಪಿಗೆ ಸ್ಮಾರಕವನ್ನು ನಿರಾಕರಿಸಿದೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಅವಕಾಶ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಮೊದಲು ಕಾಂಗ್ರೆಸ್ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲುವಂತೆ ಮಾಡಿದರು. ಅವರ ‘ಮಹಾಪರಿನಿರ್ವಾಣ’ದ ನಂತರ, ದೆಹಲಿಯಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಕಾಂಗ್ರೆಸ್ ಅವಕಾಶ ನೀಡಲಿಲ್ಲ. ಸ್ಮಾರಕವನ್ನು ನಿರ್ಮಿಸಲು ಸಹ ಕಾಂಗ್ರೆಸ್ ಅವಕಾಶ ನೀಡಲಿಲ್ಲ ಎಂದರು.