ಉತ್ತರ ಪ್ರದೇಶದಲ್ಲಿಂದು 6ನೇ ಹಂತದ ಮತದಾನ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಯೋಗಿ ಆದಿತ್ಯನಾಥ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಶೇ.80ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಗೋರಖ್‌ಪುರದಲ್ಲಿ ಮತ ಚಲಾಯಿಸಿ ಮಾತನಾಡಿದ್ದಾರೆ. ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯೆಯ ಸ್ಥಾನಗಳಲ್ಲಿ ಗೆಲುವು ಸಾಧಿಸುವ ಭರವಸೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತ ಚಲಾಯಿಸುವ ನಂಬಿಕೆ ಇದೆ ಎಂದಿದ್ದಾರೆ.

ಗೋರಖ್‌ಪುರದ ಲೋಕಸಭಾ ಕ್ಷೇತ್ರದ ಎಂಪಿಯಾಗಿದ್ದ ಯೋಗಿ ಆದಿತ್ಯನಾಥ್ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!