Tuesday, March 28, 2023

Latest Posts

ಕಾಶಿ ವಿಶ್ವನಾಥ ಮಂದಿರಕ್ಕೆ 100 ಬಾರಿ ಭೇಟಿ ನೀಡಿದ ಉತ್ತರ ಪ್ರದೇಶದ ಮೊದಲ ಸಿಎಂ ಯೋಗಿ ಆದಿತ್ಯನಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ 6 ವರ್ಷದಲ್ಲಿ ಯೋಗಿ ಆದಿತ್ಯನಾಥ್ 100 ಬಾರಿ ಕಾಶಿ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈ ಮೂಲಕ ನೂರು ಬಾರಿ ಭೇಟಿ ನೀಡಿದ ಉತ್ತರ ಪ್ರದೇಶದ ಮೊದಲ ಮುಖ್ಯಮಂತ್ರಿ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಾರ್ಚ್ 17ರಂದು ಹಲವು ಅಭಿವೃದ್ಧಿ ಕಾಮಾಕಾರಿ ಪರಿಶೀಲನೆ ಹಾಗೂ ಯೋಜನೆಗೆ ಚಾಲನೆ ನೀಡಲು ಯೋಗಿ ಆದಿತ್ಯನಾಥ್ ವಾರಣಾಸಿಗೆ 2ದಿನದ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ 100ನೇ ಬಾರಿಗೆ ಕಾಶಿ ವಿಶ್ವನಾಂದ ದೇಗುಲಕ್ಕೆ ಭೇಟಿ ನೀಡಿದ್ದಾರೆ.

2017ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಯೋಗಿ ಆದಿತ್ಯನಾಥ್ ಪ್ರತಿ 21 ದಿನಕ್ಕೆ ಕಾಶಿ ವಿಶ್ವನಾಥನ ಸನ್ನಿಧಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ರೈಲು ನಿಲ್ದಾಣ ಸೇರಿದಂತೆ ಹಲವು ಸ್ಥಳಗಳಿಗೆ ಭೇಟಿ ನೀಡಿ ಕಾಮಾಗಾರಿಗಳನ್ನು ಖುದ್ದು ಪರಿಶೀಲಿಸಿದ್ದಾರೆ. ವಾರಣಾಸಿ ಭೇಟಿಯಲ್ಲಿ ಯೋಗಿ ಆದಿತ್ಯನಾಥ್ 74 ಬಾರಿ ವಿಶ್ವೇಶ್ವರ ಮಂದಿರಕ್ಕೆ ಭೇಟಿ ನೀಡಿದ್ದಾರೆ.

100 ಬಾರಿ ಕಾಶಿ ವಿಶ್ವನಾಥ್ ಮಂದಿರಕ್ಕೆ ನೀಡಿದ ಭೇಟಿಯಲ್ಲಿ ಯೋಗಿ ಆದಿತ್ಯನಾಥ್ 88 ಬಾರಿ ಕಾಶಿ ವಿಶ್ವನಾಥ ಧಾಮಕ್ಕೂ ಭೇಟಿ ನೀಡಿದ್ದಾರೆ. ಇಷ್ಟೇ ಅಲ್ಲ ಕಾಳ ಭೈರವ ದೇವಸ್ಥಾನಕ್ಕೆ ಕಳೆದ 6 ವರ್ಷದಲ್ಲಿ 100 ಬಾರಿ ಭೇಟಿ ನೀಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!