Friday, June 2, 2023

Latest Posts

ಯುಪಿ ಸಿಎಂ ಆಗಿ ಯೋಗಿ ಆದಿತ್ಯನಾಥ್ ಆರು ವರ್ಷ ಪೂರ್ಣಗೊಳಿಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಯೋಗಿ ಆದಿತ್ಯನಾಥ್ ಅವರು ಸತತ ಆರು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2017 ರಲ್ಲಿ ಬಳಿಕ ಕಳೆದ ವರ್ಷ ಮಾರ್ಚ್ 2022 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 255 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೇ ಅವಧಿಗೆ ಅಧಿಕಾರಕ್ಕೇರಿದ ಯೋಗಿ ಅಧಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಶನಿವಾರ ಒಂದು ವರ್ಷ ಪೂರ್ಣಗೊಳಿಸಿದೆ.

ಯುಪಿಯ 21ನೇ ಸಿಎಂ ಆಗಿ ಸತತ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ಯೋಗಿ ಆದಿತ್ಯನಾಥ್, ಮಾರ್ಚ್ 1, 2023 ರಂದು ಐದು ವರ್ಷ, 346 ದಿನಗಳ ಅಧಿಕಾರವನ್ನು ಪೂರ್ಣಗೊಳಿಸುವ ಮೂಲಕ ಉತ್ತರ ಪ್ರದೇಶದಲ್ಲಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಸಿಎಂ ಎಂಬ ದಾಖಲೆ ಬರೆದಿದ್ದಾರೆ.

ಯೋಗಿಗಿಂತ ಮೊದಲು, ಕಾಂಗ್ರೆಸ್ನ ಡಾ.ಸಂಪೂರ್ಣಾನಂದ ಅವರು 1954 ರಿಂದ 1960 ರವರೆಗೆ 5 ವರ್ಷ ಮತ್ತು 345 ದಿನಗಳ ಕಾಲ ಯುಪಿ ಸಿಎಂ ಆಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!