ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಬಸ್ ಚಾಲಕಿಯರನ್ನು ಉತ್ತೇಜಿಸುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 51 ಬಸ್ಸುಗಳಿಗೆ ಹಸಿರು ನಿಶಾನೆ ತೋರಿ ‘ಮಿಷನ್ ಮಹಿಳಾ ಸಾರಥಿ’ ಕಾರ್ಯಕ್ರಮವನ್ನು ಉದ್ಟಾಟಿಸಿದ್ದಾರೆ.
ಅಯೋಧ್ಯೆಯಲ್ಲಿ ‘ಮಿಷನ್ ಮಹಿಳಾ ಸಾರಥಿ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾಜದಲ್ಲಿ ಮಹಿಳೆಯರನ್ನು ಗೌರವಿಸುವುದು ಹಾಗೂ ಅವರ ಘನತೆಯನ್ನು ಕಾಪಡುವುದು ಮುಖ್ಯ.ಮಹಿಳೆಯರು ಸ್ವಾಲಂಬಿಗಳಾಗಿ ಜೀವನ ನಡೆಸಲು ಪ್ರಾರಂಭಿಸಿದರೆ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಣಲು ಅನುಕೂಲವಾಗಲಿದೆ ಎಂದು ಹೇಳಿದರು.
ರಾಜ್ಯ ಸಾರಿಗೆ ನಿಗಮಗಳಲ್ಲಿನ 51 ಬಸ್ಗಳಿಗೆ ಮಹಿಳಾ ಚಾಲಕಿಯರು ಹಾಗೂ ನಿರ್ವಾಹಕರನ್ನು ನೇಮಿಸಿದ್ದಾರೆ. ಈ ಮೂಲಕ ಮಹಿಳೆಯರು ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಸೀಮಿತ ಎನ್ನುವ ಪರಿಕಲ್ಪನೆ ಹೋಗಲಾಡಿಸಬೇಕು. ರಾಜ್ಯದಲ್ಲಿ ಪೊಲೀಸ್ ಹುದ್ದೆಗಳು ಸೇರಿದಂತೆ ಇತರ ಇಲಾಖೆಗಳಲ್ಲಿ ಒಟ್ಟು 1.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.