28 ವರ್ಷಗಳ ಬಳಿಕ ಹುಟ್ಟೂರಿಗೆ ತೆರಳಿದ ಯೋಗಿ; ಮಗನನ್ನು ಕಂಡು ತಾಯಿಗೆ ಸಂಭ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಸರಿಸುಮಾರು 28 ವರ್ಷಗಳ ಬಳಿಕ ಹುಟ್ಟೂರಿಗೆ ತೆರಳಿ ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರ ಪ್ರಯುಕ್ತ ಯೋಗಿ ಆದಿತ್ಯನಾಥ್‌ ಹುಟ್ಟೂರಾದ ಉತ್ತರಾಖಂಡದ ಪೌರಿಗೆ ಆಗಮಿಸಿದ್ದಾರೆ. ತಮ್ಮ ಹಳೆಯ ನಿವಾಸದಲ್ಲಿ ತಾಯಿವರಾದ ಸಾವಿತ್ರಾ ದೇವಿ(85) ಅವರನ್ನು ಭೇಟಿ ಮಾಡಿ ಸಾಕಷ್ಟು ಸಮಯ ಕಳೆದಿದ್ದಾರೆ.
ತಾಯಿಗೆ ಪಾದಗಳಿಗೆರಗಿ ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ಟ್ವಿಟರ್‌ ನಲ್ಲಿ ಯೋಗಿ ಅವರು ಹಂಚಿಕೊಂಡಿದ್ದಾರೆ. ಅದಕ್ಕೆ ʼಮಾʼ ಎಂಬ ಶೀರ್ಷಿಕೆ ನೀಡಿದ್ದಾರೆ. ತಾಯಿ ಮಗನ ತಲೆಯ ಮೇಲೆ ಮಮತೆಯಿಂದ ಕೈಯಿಟ್ಟು ಆಶೀರ್ವಾದ ಮಾಡುತ್ತಿರುವುದು ಚಿತ್ರದಲ್ಲಿದೆ.

ಯೋಗಿ ಆದಿತ್ಯನಾಥ್ ಅವರು ಪ್ರಸ್ತುತ ಉತ್ತರಾಖಂಡ್‌ನ ತಮ್ಮ ತವರೂರು ಪೌರಿಯಲ್ಲಿದ್ದಾರೆ. ಅವರು ಉತ್ತರಪ್ರದೇಶ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಮ್ಮ ತಾಯಿಯನ್ನು ಭೇಟಿಯಾಗುತ್ತಿದ್ದಾರೆ.
28 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉತ್ತರಾಖಂಡ್‌ಗೆ ತಮ್ಮ ಕುಟುಂಬದ ಸಮಾರಂಭದಲ್ಲಿ ಭಾಗಿಯಾಗಲು ತೆರಳಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ಸಾಂಕ್ರಾಮಿಕದ ಕಾರಣದಿಂದ ಯೋಗಿ ಅವರಿಗೆ ಏಪ್ರಿಲ್ 2020 ರಲ್ಲಿ ಹರಿದ್ವಾರದಲ್ಲಿ ಮೃತಪಟ್ಟ ತಮ್ಮ ತಂದೆಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!