Tuesday, June 28, 2022

Latest Posts

ದೆಹಲಿ ಪ್ರವಾಸದಲ್ಲಿ ಯೋಗಿ ಆದಿತ್ಯನಾಥ್‌: ಪ್ರಮಾಣವಚನ ಸ್ವೀಕಾರದ ಬಗ್ಗೆ ವರಿಷ್ಠರ ಜತೆ ಚರ್ಚೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರ ಪ್ರದೇಶದಲ್ಲಿ ಅದ್ಭುತ ಮತಗಳೊಂದಿಗೆ ಜಯಭೇರಿ ಬಾರಿಸಿದ ಯೋಗಿ ಆದಿತ್ಯನಾಥ್‌ ಅವರು ಇಂದು ಪ್ರಧಾನಿ ಮೋದಿ ಸೇರಿದಂತೆ ಇತರ ಕೇಂದ್ರ ನಾಯಕರನ್ನು ಭೇಟಿ ಮಾಡಲಿದ್ದಾರೆ.

ದೆಹಲಿಗೆ ಎರಡು ದಿನದ ಪ್ರವಾಸಕ್ಕೆ ಹೊರಟಿರುವ ಯೋಗಿ ಆದಿತ್ಯನಾಥ್‌ ಅವರು ಹೊಸ ಸರ್ಕಾರ ರಚನೆ, ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರನ್ನು ಭೇಟಿಯಾಗಿ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವಿನ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಯೋಗಿ ಆದಿತ್ಯನಾಥ್ ಅವರು ತಮ್ಮ ಅವಧಿ ಮುಗಿಯುತ್ತಿದ್ದಂತೆ ರಾಜೀನಾಮೆ ಸಲ್ಲಿಸಿ, ಹೊಸ ಸರ್ಕಾರದ ಸ್ಥಾಪನೆಯ ಪ್ರಕ್ರಿಯೆಗೆ ದಾರಿ ಮಾಡಿಕೊಟ್ಟದ್ದಾರೆ. ಆದರೆ ಪ್ರಮಾಣವಚನ ಸ್ವೀಕಾರದ ವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿರುವಂತೆ ರಾಜ್ಯಪಾಲರು ತಿಳಿಸಿದ್ದಾರೆ.

ಇನ್ನು ಮಾ.18ರಂದು ಹೋಳಿ ಆಚರಣೆಯ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ 255 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss