Thursday, July 7, 2022

Latest Posts

ಮಾ.25 ರಂದು ಯೋಗಿ ಆದಿತ್ಯನಾಥ್‌ ಪ್ರಮಾಣವಚನ; ಪ್ರಧಾನಿ ಮೋದಿ, ಕೇಂದ್ರ ಸಚಿವರು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿರುವ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಯೋಗಿ ಆದಿತ್ಯನಾಥ್​​ ಅವರು ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ದಿನಾಂಕ ನಿಗದಿಯಾಗಿದೆ. ಮಾ. 25ರಂದು ಮುಖ್ಯೋಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭವನ್ನು ಲಖನೌದಲ್ಲಿರುವ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈಗಾಗಲೇ ಎಲ್ಲಾರೀತಿಯ ಸಿದ್ಧತೆಗಳು ನಡೆಯುತ್ತಿವೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರದ ಪ್ರಮುಖ ಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್​, ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಉತ್ತರ ಪ್ರದೇಶದ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿರುವ ಬಿಜೆಪಿ 255 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss