ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಯೋಗಿ ಆದಿತ್ಯನಾಥ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಲವಾರು ಕೇಂದ್ರ ಸಚಿವರು ಉಪಸ್ಥಿತರಿದ್ದರು.
ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಕ್ಷದ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.
ಗವರ್ನರ್ ಆನಂದಿಬೆನ್ ಪಟೇಲ್ ಅವರಿಂದ ಯೋಗಿ ಪ್ರಮಾಣ ವಚನ ಸ್ವೀಕರಿಸಿದರು.