ಇಂದು ಯೋಗಿ ಆದಿತ್ಯನಾಥ್ ಪ್ರಮಾಣವಚನ; ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಯೋಗಿ ಆದಿತ್ಯನಾಥ ಅವರು ಎರಡನೇ ಬಾರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇದರೊಂದಿಗೆ ಉತ್ತರಪ್ರದೇಶದಲ್ಲಿ ೫ ಪೂರ್ಣಾವಧಿಗೆ ಸಿಎಂ ಹುದ್ದೆಯನ್ನು ನಿರ್ವಹಿಸಿ ಮತ್ತೆ ಅಧಿಕಾರಕ್ಕೇರುತ್ತಿರುವ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಯೋಗಿ ಪಾತ್ರರಾಗಲಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ೪೦೩ ಸ್ಥಾನಗಳ ಪೈಕಿ ಬಿಜೆಪಿಯು 273 ಸ್ಥಾನಗಳಲ್ಲಿ ಭಾರಿ ಜಯಭೇರಿ ಬಾರಿಸಿತ್ತು.
ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ ನಾಲ್ಕು ಗಂಟೆಗೆ ಸಿಎಂ ಆಗಿ ಯೋಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಅದ್ದೂರಿಯಾಗಿ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಸಾವಿರಾರು ಗಣ್ಯರು ಭಾಗಿಯಾಗಲಿದ್ದಾರೆ. ಕರ್ನಾಟಕದಿಂದ ಮುಖ್ಯಮಂತ್ರಿ ಬೊಮ್ಮಾಯಿ ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!