September 27, 2026
Sunday, September 27, 2026
spot_img

ನೀಟ್‌ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಬಸ್‌ ದರದಲ್ಲಿ ಶೇ.50 ರಷ್ಟು ಡಿಸ್ಕೌಂಟ್‌ ನೀಡಿದ ಯೋಗಿ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೀಟ್‌ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ. 50 ರಷ್ಟು ಡಿಸ್ಕೌಂಟ್‌ ನೀಡಲಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ.

ಜೂನ್‌ 21ರಂದು ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಬಸ್‌ನಲ್ಲಿ ಪರೀಕ್ಷೆ ಬರೆಯಲು ತೆರಳಬಹುದು. ಎಲ್ಲರಿಗೂ ಅರ್ಧದಷ್ಟು ಡಿಸ್ಕೌಂಟ್‌ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಇಂದು ಪೂರ್ವ ಸಿದ್ಧತೆಗಳನ್ನ ಪರಿಶೀಲಿಸಿದ್ದು, ಈ ಬಾರಿ ರಾಜ್ಯದ ಎಲ್ಲಾ 57,000 ಗ್ರಾಮ ಪಂಚಾಯಿತಿಗಳು ಹಾಗೂ 762 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುವುದು. ಈ ಬಾರಿ ಯೋಗ ದಿನವನ್ನು `ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ’ ಎಂಬ ವಸ್ತುವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ಎಂದು ಹೇಳಿದ್ದಾರೆ.

Must Read