May 11, 2026
Monday, May 11, 2026
spot_img

‘ಕೃಷ್ಣಾವತಾರಂ’ಗೆ ಯೋಗಿ ಸರ್ಕಾರದ ಬೆಂಬಲ: ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತವಾಯ್ತು ‘ಕೃಷ್ಣ ಲೀಲೆ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಕೃಷ್ಣಾವತಾರಂ ಚಿತ್ರಕ್ಕೆ ಇದೀಗ ಉತ್ತರ ಪ್ರದೇಶ ಸರ್ಕಾರದಿಂದ ವಿಶೇಷ ಗೌರವ ಸಿಕ್ಕಿದೆ.

ಹೌದು, ಭಾರತೀಯ ಸಂಸ್ಕೃತಿ ಮತ್ತು ಪೌರಾಣಿಕ ಮೌಲ್ಯಗಳನ್ನು ಒಳಗೊಂಡಿರುವ ಈ ಸಿನಿಮಾವನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸಿ ಯೋಗಿ ಆದಿತ್ಯನಾಥ್ ಮಹತ್ವದ ಘೋಷಣೆ ಮಾಡಿದ್ದಾರೆ.

ಈ ನಿರ್ಧಾರದಿಂದ ಚಿತ್ರತಂಡದಲ್ಲಿ ಸಂತಸ ಮೂಡಿದ್ದು, ಪ್ರೇಕ್ಷಕರಿಗೂ ಸಿನಿಮಾ ಇನ್ನಷ್ಟು ಸುಲಭವಾಗಿ ತಲುಪುವ ಸಾಧ್ಯತೆ ಹೆಚ್ಚಾಗಿದೆ. ಜೊತೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಪ್ರದರ್ಶನಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಯುವಜನತೆಗೆ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:

ಕೃಷ್ಣಾವತಾರಂ ಚಿತ್ರದ ತಂಡ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದೆ. ಚಿತ್ರದಲ್ಲಿ ಕನ್ನಡದ ಕಾರ್ತಿಕ್ ಜಯರಾಮ್ ಹಾಗೂ ಸುಷ್ಮಿತಾ ಭಟ್ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಮೂರು ಭಾಗಗಳ ಸರಣಿಯ ಮೊದಲ ಅಧ್ಯಾಯವಾಗಿ ಬಿಡುಗಡೆಯಾದ ಈ ಸಿನಿಮಾ, ದೃಶ್ಯ ವೈಭವ ಮತ್ತು ಸಂಗೀತದಿಂದ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಬಾಕ್ಸ್ ಆಫೀಸ್‌ನಲ್ಲೂ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ವಿವಿಧ ಭಾಷೆಗಳಲ್ಲಿ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !