ಅಯೋಧ್ಯೆಯ ದೇಗುಲಗಳು, ಧಾರ್ಮಿಕ ಸಂಸ್ಥೆಗಳಿಗೆ ತೆರಿಗೆ ವಿನಾಯಿತಿಗೆ ಆದೇಶಿಸಿದ ಯೋಗಿ ಆದಿತ್ಯನಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಎರಡನೇ ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿರುವ ಯೋಗಿ ಆದಿತ್ಯನಾಥ್ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ.
ಅಯೋಧ್ಯೆಯ ಸ್ಥಳೀಯ ದೇವಾಲಯಗಳ ಮೇಲೆ ವಾಣಿಜ್ಯ ತೆರಿಗೆಯನ್ನು ವಿಧಿಸದಂತೆ ನಗರದ ಮುನ್ಸಿಪಲ್ ಕಾರ್ಪೊರೇಷನ್ ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ. ಮಠ, ಮಂದಿರ, ದತ್ತಿ ಸಂಸ್ಥೆಗಳ ಧರ್ಮಶಾಲೆಗಳು ಮತ್ತು ಧಾರ್ಮಿಕ ಸಂಘಟನೆಗಳಿಗೆ ಈ ವಿನಾಯಿತಿ ನಿಯಮಗಳು ಅನ್ವಯಿಸಲಿವೆ ಎಂದು ಅವರು ಹೇಳಿದ್ದಾರೆ.
ಈ ಎಲ್ಲಾ ಸಂಸ್ಥೆಗಳು ದತ್ತಿ ಕೆಲಸ ಹಾಗೂ ಸಾರ್ವಜನಿಕ ಸೇವೆಯನ್ನು ಮಾಡುತ್ತಿರುವುದರಿಂದ ಈ ವಿನಾಯಿತಿಗಳನ್ನು ನೀಡಲಾಗಿದೆ. ಕಟ್ಟಡ ತೆರಿಗೆ, ನೀರಿನ ತೆರಿಗೆ ಮತ್ತು ಒಳಚರಂಡಿ ತೆರಿಗೆಗೆ ಸೇರಿದಂತೆ ವಿವಿಧ ತೆರಿಗೆಗಳನ್ನು ಮುಕ್ತಗೊಳಿಸುವಂತೆ ಮಹಾನಗರ ಪಾಲಿಕೆಗೆ ಸಿಎಂ ಆದಿತ್ಯನಾಥ್ ಸೂಚಿಸಿದರು. ಅಯೋಧ್ಯೆ ನಗರದಲ್ಲಿ ಮುಂಬರುವ ರಾಮ ನವಮಿ ಮೇಳದಲ್ಲಿ ನಡೆಯುವ ಉತ್ಸವದ ಸಿದ್ಧತೆಗಳನ್ನು ಅವರು ಪರಿಶೀಲನೆ ನಡೆಸಿದರು. ಬಳಿಕ ಅವರು ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ಭಗವಾನ್ ಶ್ರೀ ರಾಮ ಮಂದಿರದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದರು.
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ಕಾಲ ಉತ್ಸವವು ಸ್ಥಗಿತಗೊಂಡಿತ್ತು. ಈ ಭಾರೀ ವಿಜೃಂಭಣೆಯಿಂದ ಉತ್ಸವ ನೆರವೇರಲಿದ್ದು, 10 ಲಕ್ಷ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!