ಹೊಸದಿಗಂತ ಡಿಜಿಟಲ್ ಡೆಸ್ಕ್:
2002ರಲ್ಲಿ ನಡೆದ ಗೋಧ್ರಾ ದುರಂತಕ್ಕೆ ಕಾರಣವಾದ ಘಟನೆಗಳ ಆಧಾರದ ಮೇಲೆ ನಿರ್ಮಾಣವಾದ ‘ದಿ ಸಾಬರಮತಿ ರಿಪೋರ್ಟ್’ ಚಿತ್ರವನ್ನು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಚಿತ್ರತಂಡವನ್ನು ಮೋದಿ ಹೊಗಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಘಟನೆಯ ಸತ್ಯ ಹೊರಬರುತ್ತಿರುವುದು ಒಳ್ಳೆಯದು. ಸಾಮಾನ್ಯ ಜನರು ಇದನ್ನು ಸಿನಿಮಾ ಮೂಲಕ ನೋಡಬಹುದು. ಈ ಚಲನಚಿತ್ರವನ್ನು ಜನರು ನೋಡಲೇಬೇಕು. ದುರಂತದ ಹಿಂದಿನ ಸತ್ಯವನ್ನು ಬಹಿರಂಗಪಡಿಸುವಲ್ಲಿ ಚಿತ್ರತಂಡ ಶ್ರಮಿಸಿದೆ ಎಂದು ಕೊಂಡಾಡಿದ್ದಾರೆ.
ಈ ದುರಂತದ ಘಟನೆಯನ್ನು ಪಟ್ಟಭದ್ರ ಹಿತಾಸಕ್ತಿಯ ಗುಂಪುಗಳು ರಾಜಕೀಯಗೊಳಿಸಿವೆ. ಇದನ್ನು ಒಬ್ಬ ನಾಯಕನ ಪ್ರತಿಷ್ಠೆಗೆ ಕಳಂಕ ತರುವ ಅವಕಾಶವಾಗಿ ಬಳಸಿಕೊಂಡಿವೆ ಎಂದು ಬರೆದುಕೊಂಡಿದ್ದಾರೆ.
ಧೀರಜ್ ಸರ್ನಾ ನಿರ್ದೇಶನದ ‘ದಿ ಸಾಬರಮತಿ ರಿಪೋರ್ಟ್’ ಚಿತ್ರವು ನ.15 ರಂದು ಬಿಡುಗಡೆ ಆಗಿತ್ತು. ಈ ಚಿತ್ರದಲ್ಲಿ ವಿಕ್ರಾಂತ್ ಮೆಸ್ಸಿ, ರಾಶಿ ಖನ್ನಾ ಮತ್ತು ರಿಧಿ ಡೋಗ್ರಾ ಸೇರಿದಂತೆ ಇತರರು ನಟಿಸಿದ್ದಾರೆ.
Well said. It is good that this truth is coming out, and that too in a way common people can see it.
A fake narrative can persist only for a limited period of time. Eventually, the facts will always come out! https://t.co/8XXo5hQe2y
— Narendra Modi (@narendramodi) November 17, 2024