‘ನೀವು ನನ್ನ ಸಹೋದರಿಯರಿದ್ದಂತೆ, ದಯವಿಟ್ಟು ಪ್ರತಿಭಟನೆ ಕೈಬಿಡಿ’: ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕಳೆದ ಐದು ದಿನಗಳಿಂದ ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ಬೀಡುಬಿಟ್ಟು ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮನವೊಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಎಕ್ಸ್ ಮೂಲಕ ಪ್ರತಿಭಟನಾನಿರತರಿಗೆ ಸಂದೇಶ ನೀಡಿರುವ ಅವರು, ಸರ್ಕಾರದ ಪರವಾಗಿ ಕಳಕಳಿಯ ಮನವಿ ಮಾಡಿದ್ದಾರೆ. “ಕುಟುಂಬದ ಜವಾಬ್ದಾರಿಗಳನ್ನು ಬದಿಗಿಟ್ಟು ನೀವು ಹಗಲು-ರಾತ್ರಿ ಎನ್ನದೆ ಹೋರಾಟ ನಡೆಸುತ್ತಿರುವುದು ನೋವು ತಂದಿದೆ. ನೀವು ಕೇವಲ ಆರೋಗ್ಯ ಕಾರ್ಯಕರ್ತೆಯರಲ್ಲ, ನನ್ನ ಪಾಲಿಗೆ ಸಹೋದರಿಯರಿದ್ದಂತೆ. ಒಬ್ಬ ಅಣ್ಣನ ಸ್ಥಾನದಲ್ಲಿ ನಿಂತು ಕೇಳಿಕೊಳ್ಳುತ್ತಿದ್ದೇನೆ, ದಯವಿಟ್ಟು ಮುಷ್ಕರವನ್ನು ಸ್ಥಗಿತಗೊಳಿಸಿ,” … Continue reading ‘ನೀವು ನನ್ನ ಸಹೋದರಿಯರಿದ್ದಂತೆ, ದಯವಿಟ್ಟು ಪ್ರತಿಭಟನೆ ಕೈಬಿಡಿ’: ಆಶಾ ಕಾರ್ಯಕರ್ತೆಯರಿಗೆ ಸಿಎಂ ಮನವಿ