ನೀವು ನಮ್ಮವರು… ಪಿಒಕೆ ಜನರೇ ಭಾರತ ಸೇರಿ: ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನೆಲೆಸಿರುವವರನ್ನೂ ಪಾಕಿಸ್ತಾನವು ವಿದೇಶಿಯರು ಎಂದು ಪರಿಗಣಿಸುತ್ತಿದೆ. ಆದ್ರೆ ನಾವು ನಿಮ್ಮನ್ನು ನಮ್ಮವರೇ ಎಂದೇ ಭಾವಿಸುತ್ತೇವೆ. ಇಲ್ಲಿ ವಾಸಿಸುತ್ತಿರುವ ಜನರು ಭಾರತವನ್ನು ಸೇರಲು ಬಯಸಿದರೆ, ಅದನ್ನು ಪರಿಶೀಲಿಸಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭರವಸೆ ನೀಡಿದ್ಧಾರೆ .

ಜಮ್ಮುವಿನ ರಾಮ್‌ಬನ್‌ನಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಪಾಕ್‌ ಆಕ್ರಮಿತ ಕಾಶ್ಮೀರದ ನಿವಾಸಿಗಳನ್ನು ವಿದೇಶಿಯರು ಎಂದು ಪಾಕಿಸ್ತಾನದ ಸಾಲಿಸಿಟರ್‌ ಜನರಲ್‌ ಅವರು ನ್ಯಾಯಾಲಯದಲ್ಲಿ ನಿರ್ಣಯವನ್ನು ಮಂಡಿಸಿದ್ದಾರೆ. ಭಾರತ ಸರ್ಕಾರವು ಪಿಒಕೆ ನಿವಾಸಿಗಳನ್ನು ನಮ್ಮವರು ಎಂದೇ ಭಾವಿಸುತ್ತೇವೆ’ ಎಂದು ಸ್ಪಷ್ಟಪಡಿಸಿದರು.

2019ರ ಆಗಸ್ಟ್‌ ತಿಂಗಳಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯಲ್ಲಿ ಮಹತ್ತರ ಬದಲಾವಣೆಯಾಗಿದೆ. ನಮಗೆ ಅಧಿಕಾರ ನೀಡಿದರೆ, ಮುಂದಿನ ಹತ್ತು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಮಾದರಿ ರಾಜ್ಯವನ್ನಾಗಿ ಪರಿವರ್ತಿಸುತ್ತೇವೆ ಎಂದು ಭರವಸೆ ನೀಡಿದರು.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!