ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಬಳಿಕ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಅಸಮಾಧಾನವಿದೆ ಎಂಬ ಮಾತುಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾವು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್ ಪ್ರಮುಖ ಕಾರಣ. ಕಾಂಗ್ರೆಸ್ ಗೆ ಬರುವಂತೆ ನನ್ನ ಕಾರ್ಯಕರ್ತರಿಗೆ ಹೇಳಿದ್ದೀರಾ. ಬಿಜೆಪಿ-ಜೆಡಿಎಸ್ ಮೈತ್ರಿ ಮುರಿದು ಬೀಳುತ್ತದೆ ಎಂದು ಹೇಳಿದ್ದಾರೆ.
ನನ್ನ ಕಾರ್ಯಕರ್ತರನ್ನು ಕಾಂಗ್ರೆಸ್ಗೆ ಕರೆದಿದ್ದೀರಾ? ಬಿಜೆಪಿ ಜೊತೆ ಅಧಿಕೃತ ಮೈತ್ರಿಗೆ ಕಾರಣ ಅವರೇ. ಹಳೇ ಮೈಸೂರಿನಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿತ್ತು. ನಾನು ನಿಮ್ಮೊಂದಿಗೆ ಇದ್ದಾಗ ನೀವು ಹೇಗೆ ವರ್ತಿಸಿದ್ದೀರಿ ಎಂದು ನನಗೆ ತಿಳಿದಿದೆ.
ನಿಮ್ಮ ಜೊತೆ ಸೇರಿ ಸರ್ಕಾರ ರಚಿಸಿದ ನನ್ನ ಪಕ್ಷವನ್ನು ನಾಶ ಮಾಡಿದ್ದೀರಿ. ಈಗ ಶಾಸಕರನ್ನ ಸೆಳೆಯುವ ಪ್ರಯತ್ನ ಮಾಡ್ತಾ ಇದ್ದೀರಾ. ನೀವು ನಮ್ಮನ್ನ ಮುಗಿಸಲು ಹಂತ ಹಂತವಾಗಿ ಏನು ಮಾಡಿದ್ದೀರಾ ಅನ್ನೋದು ನನಗೆ ಗೊತ್ತಿದೆ ಎಂದು ಡಿಕೆಶಿ ವಿರುದ್ಧ ಹೆಚ್ಡಿಕೆ ಕಿಡಿಕಾರಿದ್ದಾರೆ.