‘ನನ್ನ ಹಿರಿಯ ಸಹೋದರ ನಿಮಗೆ ಸ್ವಾಗತ’: ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಭೂತಾನ್‌ ಪಿಎಂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭೂತಾನ್‌ (Bhutan) ತಲುಪಿದ ನರೇಂದ್ರ ಮೋದಿಯವರಿಗೆ (Narendra Modi) ಅದ್ದೂರಿ ಸ್ವಾಗತ ಸಿಕ್ಕಿದೆ. ಭೂತಾನ್‌ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಅವರು ಮೋದಿಯವರನ್ನು ಆಲಿಂಗಿಸಿ ʼನನ್ನ ಹಿರಿಯ ಸಹೋದರ ನಿಮಗೆ ಸ್ವಾಗತʼ ಎಂದು ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ಮೋದಿಯವರ ಭೂತಾನ್ ಭೇಟಿ ಮಾರ್ಚ್ 21 ಹಾಗೂ 22 ರಂದು ನಡೆಯಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಪ್ರಧಾನಿ ಮೋದಿಯವರ ಈ ಭೇಟಿಯನ್ನು ಮುಂದೂಡಲಾಯಿತು.

ಇದೀಗ ಇಂದು ಭೂತಾನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನರೇಂದ್ರ ಮೋದಿಯವರಿಗೆ ಪ್ರಧಾನಿ ತ್ಶೆರಿಂಗ್ ತೊಬ್ಗೇ (Tshering Tobgay) ಅವರು ಭವ್ಯ ಸ್ವಾಗತ ಕೋರಿದರು. ಜೊತೆಗೆ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ಗೌರವ ರಕ್ಷೆ ನೀಡಲಾಯಿತು. ಒಟ್ಟಿನಲ್ಲಿ ರಾಜಧಾನಿ ಥಿಂಪುವಿನಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ದೊರೆಯಿತು. ರಸ್ತೆಬದಿಯಲ್ಲಿ ಜನ ನಿಂತು ಪ್ರಧಾನಿ ಮೋದಿಯವರನ್ನು ವಿಶೇಷವಾಗಿ ಸ್ವಾಗತಿಸಿದರು.

ಪ್ರಧಾನಿ ಮೋದಿಯವರ ಭೂತಾನ್ ಭೇಟಿಯಿಂದ ಸ್ಥಳೀಯರು ಸಂತಸಗೊಂಡಿದ್ದಾರೆ. ಪ್ರಧಾನಿ ಮೋದಿ ನಮ್ಮ ದೇಶಕ್ಕೆ ಬಂದಿದ್ದಾರೆ, ನಮಗೆ ತುಂಬಾ ಸಂತೋಷವಾಗಿದೆ ಎಂದು ಮಗುವೊಂದು ಹೇಳಿದೆ.

ಪ್ರಧಾನಿ ಮೋದಿಯವರು ಭೂತಾನ್‌ಗೆ ಆಗಮಿಸಿದ ನಂತರ, ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಅವರು ‘ನನ್ನ ಹಿರಿಯ ಸಹೋದರ, ಭೂತಾನ್‌ಗೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!