ನಮ್ಮದು ಎಷ್ಟು ವಿಮಾನ ಬಿದ್ದಿದೆ ಅಂತ ಕೇಳುತ್ತೀರಿ. ನಾವು ಎಷ್ಟು ಹೊಡೆದುರುಳಿಸಿದ್ದೇವೆ ಅಂತ ಯಾರೊಬ್ಬರೂ ಕೇಳಲ್ಲ: ರಾಜನಾಥ್‌ ಸಿಂಗ್‌ ಚಾಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಆಪರೇಷನ್‌ ಸಿಂದೂರ ಚರ್ಚೆ ವೇಳೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಗುಡುಗಿದ್ದಾರೆ.

ವಿಪಕ್ಷಗಳು ನಮ್ಮ ದೇಶದ ಎಷ್ಟು ವಿಮಾನಗಳು ಬಿದ್ದಿವೆ ಅಂತಲೇ ಕೇಳುತ್ತಿವೆ. ಆದ್ರೆ ನಾವು ಎಷ್ಟು ಪಾಕಿಸ್ತಾನಿ ವಿಮಾನಗಳನ್ನ ಹೊಡೆದುರುಳಿಸಿದ್ದೇವೆ ಅಂತ ಯಾರೊಬ್ಬರೂ ಕೇಳಲಿಲ್ಲ. ವಿಪಕ್ಷಗಳ ಪ್ರಶ್ನೆಗಳು ಜನರ ಪ್ರಶ್ನೆ ಎಂದು ಅನ್ನಿಸುತ್ತಿಲ್ಲ ಎಂದುಚಾಟಿ ಬೀಸಿದರು .

ಸಂಸತ್‌ನಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದ ಮುಖ್ಯ ಪ್ರಶ್ನೆಗಳನ್ನು ಸರ್ಕಾರಕ್ಕೆ ಕೇಳುವುದು ವಿರೋಧ ಪಕ್ಷಗಳ ಕೆಲಸ. ಆದ್ರೆ ನಮ್ಮ ದೇಶದ ಎಷ್ಟು ವಿಮಾನಗಳು ಬಿದ್ದಿವೆ ಅಂತಲೇ ಕೇಳುತ್ತಿವೆ. ನಾವು ಎಷ್ಟು ಪಾಕಿಸ್ತಾನಿ ವಿಮಾನಗಳನ್ನ ಹೊಡೆದುರುಳಿಸಿದ್ದೇವೆ ಅಂತ ಯಾರೊಬ್ಬರೂ ಕೇಳಲಿಲ್ಲ. ವಿಪಕ್ಷಗಳ ಪ್ರಶ್ನೆಗಳು ಜನರ ಪ್ರಶ್ನೆ ಎಂದು ಅನ್ನಿಸುತ್ತಿಲ್ಲ ಎಂದು ಹರಿಹಾಯ್ದರು.

ವಿಪಕ್ಷಗಳು ನಮ್ಮ ಸೈನಿಕರಲ್ಲಿ ಯಾರಿಗಾದರೂ ಹಾನಿಯಾಗಿದೆಯೇ ಅಂತ ಕೇಳಿ ಅದಕ್ಕೆ ಉತ್ತರ ಇಲ್ಲ. ಆಪರೇಷನ್ ಸಿಂದೂರ್ ಕಾರ್ಯಚರಣೆ ಯಶಸ್ವಿಯಾಗಿದೆ ಎಂದು ಕೇಳಿ.. ಅದಕ್ಕೆ ಉತ್ತರ ಹೌದು. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂದೂರ ಅಳಿಸಿದ ಉಗ್ರರನ್ನು ನಮ್ಮ ಸಶಸ್ತ್ರ ಪಡೆಗಳು ನಿರ್ಮೂಲನೆ ಮಾಡಿದೆಯೇ? ಉತ್ತರ: ಹೌದು ಎದೇ ಆಗಿದೆ. ನೀವು ಪ್ರಶ್ನೆ ಕೇಳಲು ಬಯಸಿದ್ರೆ ಇದನ್ನ ಕೇಳಿ ಎಂದು ಕುಟುಕಿದರು.

ಈ ಸೇನಾ ಕಾರ್ಯಾಚರಣೆ ಭಾರತದ ಸೇನಾ ಸಾಮರ್ಥ್ಯಕ್ಕೆ ಉದಾಹರಣೆ ಮಾತ್ರವಲ್ಲ, ಭಯೋತ್ಪಾದನೆ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಪ್ರತೀಕ ಎಂದು ಬಣ್ಣಿಸಿದರು. ಪಾಕಿಸ್ತಾನದ ದಾಳಿ ವೇಳೆ ಭಾರತದ್ದು ಆತ್ಮರಕ್ಷಣೆಯ ಪ್ರತಿದಾಳಿಯಾಗಿತ್ತು. ಭಾರತ ಯಾರನ್ನೂ ಉದ್ದೇಶ ಪೂರ್ವಕವಾಗಿ ಟಾರ್ಗೆಟ್‌ ಮಾಡಿಲ್ಲ. ಆದ್ರೆ ಪಾಕಿಸ್ತಾನ ನಮ್ಮ ವಿಮಾನ ನಿಲ್ದಾಣ, ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಈ ಎಲ್ಲ ದಾಳಿಗಳನ್ನು ನಮ್ಮ ಸೇನೆ ವಿಫಲಗೊಳಿಸಿದೆ. ಒಂದೇ ಒಂದು ನಿಗದಿತ ಸ್ಥಳದಲ್ಲಿ ಪಾಕಿಸ್ತಾನಕ್ಕೆ ದಾಳಿ ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಗಡಿ ದಾಟುವುದು, ಅಲ್ಲಿನ ಪ್ರದೇಶವನ್ನ ವಶಕ್ಕೆ ಪಡೆಯುವುದು ನಮ್ಮ ಉದ್ದೇಶವಾಗಿರಲಿಲ್ಲ. ಪಹಲ್ಗಾಮ್‌ ದಾಳಿಗೆ ಪ್ರತಿಕಾರ, ಭಯೋತ್ಪಾದಕ ನೆಲೆಗಳನ್ನ ಧ್ವಂಸ ಮಾಡುವುದು, ಫ್ರಾಕ್ಸಿ ವಾರ್ ಮಾಡುತ್ತಿರುವ ಪಾಕಿಸ್ತಾನಕ್ಕೆ ಬುದ್ಧಿ ಕಲಿಸುವುದು ನಮ್ಮ ಉದ್ದೇಶವಾಗಿತ್ತು. ಇದರಲ್ಲಿ ಪಾಕಿಸ್ತಾನ ಸೋಲು ಒಪ್ಪಿಕೊಂಡಿತು. ದಾಳಿಯನ್ನ ನಿಲ್ಲಿಸುವಂತೆ ಮನವಿ ಮಾಡಿಕೊಂಡಿತು. ಪಾಕಿಸ್ತಾನದ ಡಿಜಿಎಂಓ ಮನವಿ ಬಳಿಕವೇ ಕದನ ವಿರಾಮ ಮಾಡಿಕೊಳ್ಳಲಾಯಿತು. ಆದ್ರೆ ಆಪರೇಷನ್‌ ಸಿಂಧೂರ ಇನ್ನೂ ಮುಗಿದಿಲ್ಲ. ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪಾಕ್‌ ಪ್ರಚೋದನೆ ನೀಡಿದ್ರೆ ಮತ್ತೆ ಆಪರೇಷನ್‌ ಶುರುವಾಗಲಿದೆ. ಆಪರೇಷನ್‌ ಸಿಂಧೂರದಿಂದ ನಮ್ಮ ಸೈನಿಕರ ಮನೋಬಲ ಹೆಚ್ಚಾಗಿದೆ ಎಂದು ಇಂಚಿಂಚೂ ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!