October 9, 2026
Friday, October 9, 2026
spot_img

ಹೆಲಿಕಾಪ್ಟರ್‌ನಲ್ಲಿ ಓಡಾಡಿದರೆ ಪ್ರಜಾಸೇವಕ ಆಗಲು ಸಾಧ್ಯವಿಲ್ಲ: ಸಿಎಂ ವಿರುದ್ದ ಬಿ.ವೈ. ವಿಜಯೇಂದ್ರ ವ್ಯಂಗ್ಯ

ಹೊಸದಿಗಂತ ವರದಿ ಗಂಗಾವತಿ:

 ಬಳ್ಳಾರಿ ಚಲೋ ಪಾದಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆ ಆರಂಭಿಸಿದ ಬಳಿಕವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರ ಕರ್ನಾಟಕದತ್ತ ಬರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು.

ಗಂಗಾವತಿಯ ಜಂಗಮರ ಕಲ್ಗುಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ‘ನಾಡಿನ ದೊರೆ’ಎಂದು ಕರೆಯಬೇಡಿ, ‘ಪ್ರಜಾಸೇವಕ’ ಎಂದು ಕರೆಯಿರಿ ಎಂದು ಹೇಳಿರುವುದಕ್ಕೆ, ಹೆಲಿಕಾಪ್ಟರ್‌ನಲ್ಲಿ ಓಡಾಡಿದರೆ ಪ್ರಜಾಸೇವಕ ಆಗಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲೇ ಇದ್ದ ಮುಖ್ಯಮಂತ್ರಿಗಳು, ನಾವು ಪಾದಯಾತ್ರೆ ಆರಂಭಿಸದಿದ್ದರೆ ಉತ್ತರ ಕರ್ನಾಟಕದತ್ತ ಬರುತ್ತಿದ್ದರೇ ಎಂಬುದನ್ನು ಜನರೇ ಪ್ರಶ್ನಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ:

ಮುಖ್ಯಮಂತ್ರಿಗಳ ಜೀವನದ ಬಹುದೊಡ್ಡ ಆಸೆಗಳು ಬಿಡದಿ ಟೌನ್‌ಶಿಪ್ ಮತ್ತು ಕನಕಪುರ ಏರ್‌ಪೋರ್ಟ್ ಎಂದು ಕಾಣುತ್ತಿದೆ. ಇವೆರಡೂ ಯೋಜನೆಗಳು ಪೂರ್ಣಗೊಂಡರೆ, ಮುಂದೆ ಮುಖ್ಯಮಂತ್ರಿ ಆಗಿದ್ದರೂ, ಇಲ್ಲದಿದ್ದರೂ ಪರವಾಗಿಲ್ಲ ಎಂಬ ಲೆಕ್ಕಾಚಾರದಲ್ಲಿರುವಂತಿದೆ ಎಂದು ವ್ಯಂಗ್ಯವಾಡಿದರು.

Must Read