ಸಕ್ಕರೆ ತಿನ್ನೋದಿಲ್ಲ ಬರೀ ಬೆಲ್ಲ ಅಂತೀರಾ? ಶುಗರ್‌ನಷ್ಟೇ ಕೆಮಿಕಲ್ಸ್‌ ಬೆಲ್ಲದಲ್ಲೂ ಇದೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಕ್ಕರೆ ತಯಾರು ಮಾಡೋದಕ್ಕೆ ಕೆಮಿಕಲ್ಸ್‌ ಬಳಕೆ ಮಾಡ್ತಾರೆ, ನಾವು ಬೆಲ್ಲ ಮಾತ್ರ ಬಳಕೆ ಮಾಡ್ತೀವಿ ಅನ್ನೋರು ಈ ಸುದ್ದಿಯನ್ನು ಮಿಸ್‌ ಮಾಡದೇ ಓದಿ..

ಬೆಲ್ಲ ಕೂಡ ಇದೀಗ ಅಪಾಯಕಾರಿ ರಾಸಾಯನಿಕ ಹೊಂದಿರುವುದು ಆಹಾರ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬೆಲ್ಲದಲ್ಲಿ ಅಪಾಯಕಾರಿ ರಾಸಾಯನಿಕ ಸಲ್ಫರ್ ಡೈಆಕ್ಸೈಡ್ ಹಾಗೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಗೊತ್ತಾಗಿದೆ. ಬೆಲ್ಲ ಗೋಲ್ಡನ್ ಕಲರ್​ನಲ್ಲಿ ಕಾಣಿಸುವ ಮೂಲಕ ಜನರನ್ನು ಸೆಳೆಯುವಂತೆ ಮಾಡಲು ಕೃತಕ ಬಣ್ಣ ಬೆರೆಸಲಾಗುತ್ತಿದೆ ಎಂಬುದು ತಿಳಿದುಬಂದಿದೆ.

ಗೋಲ್ಡನ್​ ಕಲರ್​​ನಲ್ಲಿ ಕಾಣಿಸುವ ಬೆಲ್ಲದತ್ತ ಜನ ಆಕರ್ಷಿತರಾಗುತ್ತಾರೆ. ಆದರೆ ರಾಸಾಯನಿಕ ಬೆಲ್ಲ ಆರೋಗ್ಯದ ಮೇಲೆ ಅಡ್ಡ ಪರಿಣಾಮಕ್ಕೆ ಕಾರಣವಾಗಿದೆ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.ಕರ್ನಾಟಕದ ವಿವಿಧ ಕಡೆಗಳಲ್ಲಿ ಆಹಾರ ಇಲಾಖೆ ಬೆಲ್ಲದ ಮಾದರಿಗಳನ್ನು ಸಂಗ್ರಹ ಮಾಡಿತ್ತು. ಆ ಸ್ಯಾಂಪಲ್ಸ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಯಾಲಾಗಿದೆ. ಸ್ಯಾಂಪಲ್​ಗಳಲ್ಲಿ ಕಲರ್ ಏಜೆಂಟ್ ಹಾಗೂ ಸಲ್ಫರ್ ಡೈಆಕ್ಸೈಡ್ ದೃಢಪಟ್ಟಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!