ಹೊಸದಿಗಂತ ವರದಿ, ಮೈಸೂರು:
ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ದ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ ಎಂದು ಹಿಜಾಬ್ ಧರಿಸಿ ಶಾಲೆಗೆ ಬರುತ್ತೇನೆ ಎನ್ನುತ್ತಿರುವ ವಿದ್ಯಾರ್ಥಿನಿಯರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಖಡಕ್ ಆಗಿ ಹೇಳಿದರು.
ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮಗೆ ಪಾಠ ಬೇಕಾದರೆ ಸಮವಸ್ಟ್ರ ಧರಿಸಿಯೇ ಶಾಲೆಗೆ ಬರಬೇಕು. ಕೇಸರಿ ಶಾಲು, ಹಸಿರು ಶಾಲು ಯಾವುದನ್ನೂ ಧರಿಸಿ ಬಂದರೂ ಅವರಿಗೆ ತರಗತಿಗೆ ಅವಕಾಶ ಇಲ್ಲ.
ಶಾಲಾ ಆವರಣದ ಗೇಟ್ ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ಅದರೆ ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೋಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ಗುಡುಗಿದರು.
ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ಅವರು ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು.
ಹೆಣ್ಣುಮಕ್ಕಳ ಮುಗ್ದತೆಯನ್ನ ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಶಾಲೆಯ ಒಳಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದರು. ಮಂಗಳವಾರ ನ್ಯಾಯಾಲಯದ ಆದೇಶವನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಹಿಜಾಬ್ ಧರಿಸಿ ಶಾಲೆಗೆ ಬರುವುದಕ್ಕೆ ನಿರ್ಬಂಧ ಹೇರಿರುವ ಕ್ರಮವನ್ನು ವಿರೋಧಿಸಿ, ಕೆಲ ಪ್ರಗತಿಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಶಿಕ್ಷಣ ಸಚಿವರಿಗೆ ಮುತ್ತಿಗೆ ಹಾಕಿದರು. ನಿರ್ಬಂಧ ಹಾಕಿರುವುದನ್ನು ಹಿಂತೆಗೆದುಕೊಳ್ಳಬೇಕೆAದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶಾಲೆಯಲ್ಲಿ ವಸ್ತç ಸಂಹಿತೆ ಮಾತ್ರ ಜಾರಿಯಲ್ಲಿದೆ. ಮೂರು ನ್ಯಾಯಾಲಯಗಳು ಕೂಡ ಇದನ್ನೇ ಹೇಳಿವೆ. ಇಲ್ಲಿಯ ತನಕ ಯಾರೂ ಕೂಡ ಹಿಜಾಬ್ ಧರಿಸಿ ಶಾಲೆಗೆ ಬರುತ್ತಿರಲಿಲ್ಲ. ಆದರೆ ಕಳೆದ 15 ದಿನಗಳಿಂದ ಧರಿಸಿಕೊಂಡು ಬರುವ ಮೂಲಕ ವಿವಾದ ಸೃಷ್ಠಿಸುತ್ತಿದ್ದಾರೆ, ಅದಕ್ಕೆ ಅವಕಾಶ ನೀಡುತ್ತಿಲ್ಲ. ಆಯಾ ಸಂಸ್ಥೆಯವರು ಜಾರಿಗೆ ತಂದಿರುವ ಶಾಲಾ ವಸ್ತçಗಳನ್ನು ಮಾತ್ರ ವಿದ್ಯಾರ್ಥಿಗಳು ಧರಿಸಿಕೊಂಡು ಬರಬೇಕು ಎಂದರು.