ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆಯಿಂದ ಅಮಾನತುಗೊಂಡಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಬೆಂಬಲ ನೀಡಿದ್ದಾರೆ.
ಸಂಸತ್ತಿಗೆ ಪ್ರವೇಶಿಸುವ ಮೊದಲು ಸೋನಿಯಾ ಗಾಂಧಿ ಅವರು ರಾಜ್ಯಸಭೆಯಿಂದ ಅಮಾನತುಗೊಳಿಸಿರುವುದನ್ನು ಪ್ರತಿಭಟಿಸುತ್ತಿರುವ ಸಂಜಯ್ ಸಿಂಗ್ ಅವರನ್ನು ಸಂಸತ್ತಿನ ಸಂಕೀರ್ಣದಲ್ಲಿ ಭೇಟಿಯಾದರು ಮತ್ತು ಅವರೊಂದಿಗೆ ಸಂಕ್ಷಿಪ್ತ ಮಾತುಕತೆ ನಡೆಸಿದರು.
ಈ ವೇಳೆ ‘ನಿಮಗೆ ನಮ್ಮ ಬೆಂಬಲವಿದೆ’ ಎಂದು ಸೋನಿಯಾ ಗಾಂಧಿ ಹೇಳಿದರು.
ಮಣಿಪುರ ವಿಷಯದ ಕುರಿತು ಪ್ರತಿಭಟನೆ ನಡೆಸುವಾಗ ಸಭಾಪತಿಗಳ ನಿರ್ದೇಶನಗಳನ್ನು ಪದೇ ಪದೆ ಉಲ್ಲಂಘಿಸಿದ್ದಕ್ಕಾಗಿ ಸಂಜಯ್ ಸಿಂಗ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಸೋಮವಾರ (ಜು.24) ಅಮಾನತುಗೊಳಿಸಲಾಗಿತ್ತು.