ಹೊಸದಿಗಂತ ಡಿಜಿಟಲ್ ಡೆಸ್ಕ್
ಆರ್ ಅಶೋಕ್ ಅವರು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಕುಮಾರಸ್ವಾಮಿ ಸೇರಿ ಒಟ್ಟಾಗಿ ಕೆಲಸ ಮಾಡಿ ಎಂದು ಸಲಹೆ ನೀಡಿದ ಅವರು, ಯಾವುದೇ ಸಮಯದಲ್ಲಿ ಸಹಾಯ, ಆಶೀರ್ವಾದ ಇರುತ್ತದೆ ಎಂದರು.
60 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ, ಮೋದಿಯವರಿಗೆ ಗೌರವ ಬರುವ ನಿಟ್ಟಿನಲ್ಲಿ ಕೆಲಸ ಮಾಡಿ ಅಂದರು, ನಾನು ಕೂಡ ಲೋಕಸಭೆಗೆ ಸಂಪೂರ್ಣವಾಗಿ ತೊಡಗಿಕೊಳ್ಳುತ್ತೇನೆ ಅಂದಿದ್ದಾರೆ. ಒಟ್ಟಿಗೆ ಹೋಗಿ ದುರಾಡಳಿತ ಸರ್ಕಾರವನ್ನು ತೆಗೆದುಹಾಕಿ ಎಂದು ಸಲಹೆ ನೀಡಿದ್ದಾರೆ.
ಇನ್ನು ಇದೇ ವೇಳೆ ‘ಮೈತ್ರಿ ವಿಚಾರವಾಗಿ ಕೂಡ ಮಾತುಕತೆ ಮಾಡಿದ್ದೇವೆ. ವಿಧಾನಸಭೆ ಒಳಗೆ, ಹೊರಗೆ ಹೋರಾಟ ಮಾಡುತ್ತೀವಿ, ಆ ಮೂಲಕ ಸರ್ಕಾರಕ್ಕೆ ನಡುಕ ಹುಟ್ಟುವ ಕೆಲಸ ಮಾಡುತ್ತೇವೆ ಎಂದರು.