ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರ ಪ್ರದೇಶದಲ್ಲಿ ಕೊರೋನಾ ಎರಡನೇ ಅಲೆ ತೀವ್ರತೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಯಂತ್ರಣಕ್ಕೆ ತೀವ್ರವಾಗಿ ಶ್ರಮಿಸುತ್ತಿದೆ. ಈ ನಡುವೆ ಸಿಎಂ ಯೋಗಿ ಆದಿತ್ಯನಾಥ್ಗೆ ಬೆದರಿಕೆ ಕರೆಗಳು ಬಂದಿದೆ .
ಉತ್ತರ ಪ್ರದೇಶ ಪೊಲೀಸರ ತುರ್ತು ವಾಟ್ಸಾಪ್ ನಂಬರ್ 112ಗೆ ಆಡಿಯೋ ಸಂದೇಶಗಳು ಬಂದಿದ್ದು, ಇನ್ನೂ ನಿಮಗೆ ನಾಲ್ಕು ದಿನಗಳು ಮಾತ್ರ ಉಳಿದಿದೆ ಎಂದು ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಸದ್ಯ ಈ ಕುರಿತಂತೆ ಪೊಲೀಸರು ಸುಶಾಂತ್ ಗಲ್ಫ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಎಡಿಜಿ ಪ್ರಶಾಂತ್ ಕುಮಾರ್ ಅವರು ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಹೊತ್ತಿದ್ದು, ಸಂದೇಶ ಕಳುಹಿಸಿದ ನಂಬರ್ ಪತ್ತೆ ಮಾಡುವ ಕಾರ್ಯ ನಡೆಸಿದ್ದಾರೆ. ಈ ಹಿಂದೆಯೂ ಸಿಎಂ ಯೋಗಿ ವಿರುದ್ಧ ಹಲವು ಬಾರಿ ಬೆದರಿಕೆ ಕರೆಗಳ ಸಂದೇಶಗಳು ಆಗಮಿಸಿದ್ದು, ಕಳೆದ ವರ್ಷ ಸೆಪ್ಟೆಂಬರ್, ಡಿಸೆಂಬರ್ನಲ್ಲಿ ಬಂದ ಬೆದರಿಕೆ ಕರೆಗಳ ಪ್ರಕರಣದಲ್ಲಿ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು.