ಹೊಸದಿಗಂತ ಮಂಡ್ಯ :
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಇಂದೇ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಪಾಂಡವಪುರ ಪಟ್ಟಣದಲ್ಲಿ ಭಾನುವಾರ ಶ್ರೀರಂಗಪಟ್ಟಣ – ಪಾಂಡವಪುರ ನಡುವಿನ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದರು.
ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಗೊಂದಲ ಇಲ್ಲ. ಯೋಗೇಶ್ವರ್ ಅವರು ಸಹ ನಿಲ್ಲಬೇಕು ಎಂದು ಹೇಳುತ್ತಿದ್ದಾರೆ. ನ್ಯಾಯವಾಗಿ ಚರ್ಚೆ ಮಾಡುವುದಾದರೆ ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ಬರಬೇಕು. ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ನಮ್ಮ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಬೇಕು, ಘೋಷಣೆ ಮಾಡುತ್ತೇವೆ ಎಂದು ಹೇಳಿದರು.