ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿರೋ ನಟ ದರ್ಶನ್ ಹಾಗೂ ಗ್ಯಾಂಗ್ ಬೇರೆ ಬೇರೆ ಜೈಲುಗಳಲ್ಲಿ ವಿಚಾರಾಣಾಧೀನ ಖೈದಿಗಳಾಗಿ ಇಡಲಾಗಿದೆ.
ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಾ ಇದ್ದ ಫೋಟೋ ವೈರಲ್ ಆಗಿತ್ತು. ಈ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿನಲ್ಲಿ ಶಿಫ್ಟ್ ಮಾಡಲಾಗಿತ್ತು. ಈಗ ಅವರು ಎಂಟು ದಿನಕ್ಕೆ ಎಷ್ಟು ಖರ್ಚು ಮಾಡಿದ್ದಾರೆ ಎಂಬ ಲೆಕ್ಕ ಸಿಕ್ಕಿದೆ.
ದರ್ಶನ್ ಅವರು 735 ರೂ. ಹಣವನ್ನು ಕಾಫಿ ಮತ್ತು ಚಹಾಕ್ಕಾಗಿ ಖರ್ಚು ಮಾಡಿದ್ದಾರೆ. ಇಲ್ಲಿ ಅವರು ಸರಳ ಜೀವನ ನಡೆಸುವುದು ಅನಿವಾರ್ಯವಾಗಿದೆ. ಇಲ್ಲಿ ಮದ್ಯಪಾನ ಮತ್ತು ಧೂಮಪಾನವನ್ನು ನಿಷೇಧಿಸಲಾಗಿದೆ. ಈ ಕಾರಣದಿಂದಾಗಿ, ಅವರು ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.