ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.
ಪ್ರಜ್ವಲ್ ಚನ್ನಗೌಡ ಮುನೇಪ್ಪನವರ (18) ಮೃತ ದುರ್ದೈವಿ.
ತಾಲೂಕಿನ ವಕ್ಕುಂದ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿಲ್ಲಿಸಲು ತಯಾರಿ ನಡೆಸುತ್ತಿದ್ದರು. ಈ ವೇಳೆ ಅಲ್ಲಿಯೇ ಹಾದು ಹೋಗಿದ್ದ ಸರ್ವೀಸ್ ವಿದ್ಯುತ್ ತಂತಿಗೆ ಧ್ವಜಸ್ತಂಭ ತಗುಲಿದೆ. ಇದರಿಂದ ಕಂಬ ಹಿಡಿದಿದ್ದ ಪ್ರಜ್ವಲ್‌ಗೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಸ್ಥಳೀಯರು ಯುವಕನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆಯು ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.