June 18, 2026
Thursday, June 18, 2026
spot_img

ಮನೆಯಲ್ಲಿ ಶವವಾಗಿ ಪತ್ತೆಯಾದ ಯುವ ನ್ಯಾಯಾಧೀಶ: ಆತ್ಮಹ*ತ್ಯೆ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ಯುವ ನ್ಯಾಯಾಧೀಶರೊಬ್ಬರು ತಮ್ಮ ನಿವಾಸದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದ್ದು, ಸಾವಿನ ಹಿಂದಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

30 ವರ್ಷದ ಅಮನ್ ಕುಮಾರ್ ಶರ್ಮಾ ತಮ್ಮ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕುಟುಂಬ ಸದಸ್ಯರು ಮಾಹಿತಿ ನೀಡುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ಪುಣೆಯ ಸಿಂಬಿಯೋಸಿಸ್ ಕಾನೂನು ಶಾಲೆಯಿಂದ ಕಾನೂನು ಪದವಿ ಪಡೆದಿದ್ದ ಅಮನ್, 2021ರಲ್ಲಿ ದೆಹಲಿ ನ್ಯಾಯಾಂಗ ಸೇವೆಗೆ ಸೇರ್ಪಡೆಯಾಗಿದ್ದರು. ಬಳಿಕ ಕರ್ಕಾರ್ಡೂಮಾ ನ್ಯಾಯಾಲಯದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಯಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !