ಶಾಪಿಂಗ್ ಮಾಡುತ್ತಿದ್ದ ಯುವತಿಯ ಎಳೆದು ಚುಂಬಿಸಿದ ಯುವಕನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾಗವಾರದ ಮಾರುಕಟ್ಟೆ ಪ್ರದೇಶದಲ್ಲಿ ಶಾಪಿಂಗ್ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಜುಲೈ 11 ರಂದು ಸಂಜೆ 7.45 ರಿಂದ 8 ಗಂಟೆಯ ನಡುವೆ ಘಟನೆ ನಡೆದಿದೆ. ವಿದ್ಯಾರ್ಥಿನಿ ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುತ್ತಿದ್ದಾಗ ಯುವಕ ಎಳೆದು ಅಪ್ಪಿಕೊಂಡಿದ್ದು, ಲೈಂಗಿಕ ಕಿರುಕುಳ ನೀಡಿದ್ದಾನೆಂದು ತಿಳಿದುಬಂದಿದೆ.

ಈ ಸಂಬಂಧ ಯುವತಿಯ ತಾಯಿ ಮರುದಿನ ಗೋವಿಂದಪುರ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು ಯುವಕನನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಯುವಕನನ್ನು ಗೋವಿಂದಪುರ ಮುಖ್ಯ ರಸ್ತೆಯ ನಿವಾಸಿ ಮೊಹಮ್ಮದ್ ಮಾರೂಫ್ ಶೆರಿಫ್ ಎಂದು ಗುರ್ತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!