ಹೊಸ ದಿಗಂತ ವರದಿ, ವಿಜಯಪುರ:
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಗುಮ್ಮಟ ನಗರದ ಗ್ಯಾಂಗ್ ಬಾವಡಿ ಬಳಿ ನಡೆದಿದೆ.
ಇಲ್ಲಿನ ಫೈಸಲ್ ಇನಾಂದಾರ್ (24) ಮೃತಪಟ್ಟ ಯುವಕ.
ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.